Friday, July 20, 2012

ಗಾಂಧಿ ಜಯಂತಿ ಕಥಾಸ್ಪರ್ಧೆ – 2012


 
 
 

ಸ್ನೇಹಿತರೆ,
ರವಿ ಕೃಷ್ಣಾರೆಡ್ಡಿಯವರು 2008ರಲ್ಲಿ ಮೊದಲ ಗಾಂಧಿ ಜಯಂತಿ ಕಥಾಸ್ಪರ್ಧೆಯನ್ನು ನಡೆಸಿದ್ದು. ಎರಡನೆಯದು 2009ರಲ್ಲಿ. ಎರಡೂ “ವಿಕ್ರಾಂತ ಕರ್ನಾಟಕ” ವಾರಪತ್ರಿಕೆ ನಡೆಸಿದ್ದು; ಪ್ರಾಯೋಜಿಸಿದ್ದು ಅವರು ನಂತರ ವಿಕ್ರಾಂತ ಕರ್ನಾಟಕ ನಿಂತು ಹೋದ ಮೇಲೆ ಹಲವಾರು ಕಾರಣಗಳಿಂದಾಗಿ ಅವರಿಗೆ ಅದನ್ನು ಮುಂದುವರೆಸಲು ಆಗಿರಲಿಲ್ಲ. ಈಗ ವರ್ತಮಾನದ ಅಡಿಯಲ್ಲಿ ಅದನ್ನು ಮುಂದುವರೆಸಬೇಕೆಂದು ತೀರ್ಮಾನಿಸಿದ್ದಾರೆ. ಬಹುಶ: ಈ ವರ್ಷದಿಂದ ಇದನ್ನು ಪ್ರತಿ ವರ್ಷ ತಪ್ಪದೆ ನಡೆಸುವ ಯೋಜನೆ ಅವರದು.
ಗಾಂಧಿ ಜಯಂತಿ ಕಥಾಸ್ಪರ್ಧೆಯ ಆರಂಭದಲ್ಲಿ ಈ ಸ್ಪರ್ಧೆಯ ಉದ್ದೇಶ ಮತ್ತು ಕತೆಗಳು ಯಾವುದರ ಹಿನ್ನೆಲೆಯಲ್ಲಿ ರೂಪುಗೊಂಡಿರಬೇಕು ಎಂದು ಕೆಲವು ಟಿಪ್ಪಣಿ ಇದ್ದವು. ಆದರೆ ಈ ಬಾರಿ ಅಂತಹ ನಿಬಂಧನೆಗಳು ಏನೂ ಇಲ್ಲ. ಉತ್ತಮ ಕತೆಗಳನ್ನು ಬರೆಯಿರಿ ಮತ್ತು ಕಳುಹಿಸಿ ಎಂದು ಅವರು ಕೋರಿದ್ದಾರೆ.

ಬಹುಮಾನಗಳ ವಿವರ:
ಮೊದಲ ಬಹುಮಾನ: ರೂ. 6000
ಎರಡನೆ ಬಹುಮಾನ: ರೂ. 4000
ಮೂರನೆಯ ಬಹುಮಾನ: ರೂ. 3000
ಎರಡು ಪ್ರೋತ್ಸಾಹಕ ಬಹುಮಾನಗಳು: ತಲಾ ರೂ. 1000
ನಿಮ್ಮ ಕತೆ ತಲುಪಲು ಕೊನೆಯ ದಿನಾಂಕ: ಆಗಸ್ಟ್ 31, 2012
ಸೆಪ್ಟೆಂಬರ್ ತಿಂಗಳಿನಲ್ಲಿ ಕತೆಗಳ ಮೌಲ್ಯಮಾಪನ ಮಾಡಿ ಗಾಂಧಿ ಜಯಂತಿಯ ಸಂದರ್ಭದಲ್ಲಿ ಒಂದು ಪುಟ್ಟ ಸಭೆ ಮಾಡಿ ಬಹುಮಾನ ನೀಡಲಾಗುತ್ತದೆ. ಬಹುಮಾನ ಪಡೆದ ಕತೆಗಳು ನಂತರ ವರ್ತಮಾನ.ಕಾಮ್‌ನಲ್ಲಿ ಪ್ರಕಟವಾಗಲಿವೆ.
ಮಾಮೂಲಿನಂತೆ ಎಲ್ಲಾ ಕಥಾಸ್ಪರ್ಧೆಗಳ ನಿಬಂಧನೆಗಳು ಇಲ್ಲಿಯೂ ಅನ್ವಯಿಸುತ್ತವೆ: ಕತೆ ಸ್ವಂತದ್ದಾಗಿರಬೇಕು; ಅಪ್ರಕಟಿತವಾಗಿರಬೇಕು; ಕನಿಷ್ಟ 1500 ಪದಗಳದ್ದಾಗಿರಬೇಕು.

ಕೆಲವು ತಾಂತ್ರಿಕ ಮತ್ತು ಅನುಕೂಲದ ಕಾರಣಕ್ಕಾಗಿ ದಯವಿಟ್ಟು ನಿಮ್ಮ ಕತೆಯ ಸಾಫ್ಟ್ ಕಾಪಿಯನ್ನೇ ಕಳುಹಿಸಿ. ಬರಹ/ನುಡಿ/ಯೂನಿಕೋಡ್, ಹೀಗೆ ಯಾವುದೇ ತಂತ್ರಾಂಶದಲ್ಲಿದ್ದರೂ ಸರಿ.

ಕತೆಗಳನ್ನು ಕಳುಹಿಸಬೇಕಾಗದ ಇಮೇಲ್  ವಿಳಾಸ: editor@vartamaana.com

No comments:

Post a Comment

ದಾಸಿಮಯ್ಯನ ವಚನ

ಒಡಲುಗೊಂಡವ ಹಸಿವ;  ಒಡಲುಗೊಂಡವ ಹುಸಿವ  ಒಡಲುಗೊಂಡವನೆಂದು  ನೀನೆನ್ನ ಜರಿದೊಮ್ಮೆ ನುಡಿಯದಿರ ನೀನೆನ್ನಂತೆ ಒಮ್ಮೆ ಒಡಲುಗೊಂಡು ನೋಡ ರಾಮನಾಥ.