ಸ್ನೇಹಿತರೇ,
ಕಳೆದ ವರ್ಷದಂತೆ ಈ ವರ್ಷವೂ “ಗಾಂಧಿ ಜಯಂತಿ ಕಥಾ ಸ್ಪರ್ಧೆ” ಆಯೋಜಿಸಲಾಗುತ್ತಿದೆ. ಈ
ಕಥಾ ಸ್ಪರ್ಧೆಯ ಹಿನ್ನೆಲೆಯ ಬಗ್ಗೆ ಹೇಳುವುದಾದರೆ: 2008ರಲ್ಲಿ ಮೊದಲ ಗಾಂಧಿ ಜಯಂತಿ
ಕಥಾಸ್ಪರ್ಧೆಯನ್ನು ನಡೆಸಿದ್ದು. ಎರಡನೆಯದು 2009ರಲ್ಲಿ. ಎರಡೂ “ವಿಕ್ರಾಂತ ಕರ್ನಾಟಕ”
ವಾರಪತ್ರಿಕೆ ನಡೆಸಿದ್ದು; ಪ್ರಾಯೋಜಿಸಿದ್ದು ನಾನು. ನಂತರ ವಿಕ್ರಾಂತ ಕರ್ನಾಟಕ ನಿಂತು
ಹೋದ ಮೇಲೆ ಹಲವಾರು ಕಾರಣಗಳಿಂದಾಗಿ ನನಗೆ ಅದನ್ನು ಮುಂದುವರೆಸಲು ಆಗಿರಲಿಲ್ಲ. ಕಳೆದ
ವರ್ಷ ವರ್ತಮಾನದ ಅಡಿಯಲ್ಲಿ ಅದನ್ನು ಮತ್ತೆ ಆರಂಭಿಸಲಾಯಿತು. (ಗಾಂಧಿ ಜಯಂತಿ ಕಥಾ
ಸ್ಪರ್ಧೆ – 2012 ರ ಬಹುಮಾನಿತ ಕತೆಗಳ ವಿವರ ಇಲ್ಲಿದೆ.) ಈ ವರ್ಷದ ಕಥಾ ಸ್ಪರ್ಧೆಗೆ ಕತೆಗಳನ್ನು ಆಹ್ವಾನಿಸುವ ಸಮಯ ಇದು.
ಅಂದ ಹಾಗೆ ಈ ಸ್ಪರ್ಧೆಗೆ ಕಳೆದ ಬಾರಿ ಕೆಲವರು ಗಾಂಧಿಯ ಜೀವನಕ್ಕೆ ಸಂಬಂಧಿಸಿದ
ಕತೆಗಳನ್ನು ಕಳುಹಿಸಿದ್ದರು. ಇದು ಗಾಂಧಿಯ ಕುರಿತಾದ ಕತೆಗಳ ಕಥಾ ಸ್ಪರ್ಧೆಯಲ್ಲ.
ಕನ್ನಡದಲ್ಲಿಯ ಕಾಲ್ಪನಿಕ ಮತ್ತು ಸೃಜನಶೀಲ ಸಣ್ಣಕತೆಗಳಿಗೆಂದು ನಡೆಸುವ ಒಂದು ಕಥಾ
ಸ್ಪರ್ಧೆ. ಮಹಾತ್ಮ ಗಾಂಧಿಗೆ ಗೌರವಪೂರ್ವಕವಾಗಿ ಮತ್ತು ಗಾಂಧಿ ಜಯಂತಿಯ ಸಂದರ್ಭದಲ್ಲಿ
ನಡೆಸುವುದರಿಂದ ಅದಕ್ಕೆ ’ಗಾಂಧಿ ಜಯಂತಿ ಕಥಾ ಸ್ಪರ್ಧ” ಎಂದು ಹೆಸರಿಡಲಾಗಿದೆ.
ಕಥಾ ಸ್ಪರ್ಧೆಯ ನಿಯಮಗಳು ಮತ್ತಿತರ ವಿವರಗಳು ಇಂತಿವೆ:
- ಕತೆ ಸ್ವಂತದ್ದಾಗಿರಬೇಕು; ಅಪ್ರಕಟಿತವಾಗಿರಬೇಕು (ಬ್ಲಾಗ್/ವೆಬ್‌ಸೈಟ್‌ಗಳಲ್ಲೂ ಪ್ರಕಟವಾಗಿರಬಾರದು); ಕನಿಷ್ಟ 1500 ಪದಗಳದ್ದಾಗಿರಬೇಕು.
- ಕತೆಯ ಸಾಫ್ಟ್ ಕಾಪಿಯನ್ನೇ ಕಳುಹಿಸಬೇಕು. ಬರಹ/ನುಡಿ/ಯೂನಿಕೋಡ್, ಹೀಗೆ ಯಾವುದೇ ತಂತ್ರಾಂಶದಲ್ಲಿದ್ದರೂ ಸರಿ. ಸ್ಕ್ಯಾನ್ ಮಾಡಿ ಕಳುಹಿಸುವ ಇಮೇಜ್‌ಗಳನ್ನು ಪರಿಗಣಿಸಲಾಗುವುದಿಲ್ಲ.
- ಕತೆಯ ಸಾಫ್ಟ್ ಕಾಪಿಯನ್ನೇ ಕಳುಹಿಸಬೇಕು. ಬರಹ/ನುಡಿ/ಯೂನಿಕೋಡ್, ಹೀಗೆ ಯಾವುದೇ ತಂತ್ರಾಂಶದಲ್ಲಿದ್ದರೂ ಸರಿ. ಸ್ಕ್ಯಾನ್ ಮಾಡಿ ಕಳುಹಿಸುವ ಇಮೇಜ್‌ಗಳನ್ನು ಪರಿಗಣಿಸಲಾಗುವುದಿಲ್ಲ.
ಬಹುಮಾನಗಳ ವಿವರ:
- ಮೊದಲ ಬಹುಮಾನ: ರೂ. 6000
- ಎರಡನೆ ಬಹುಮಾನ: ರೂ. 4000
- ಮೂರನೆಯ ಬಹುಮಾನ: ರೂ. 3000
- ಎರಡು ಪ್ರೋತ್ಸಾಹಕ ಬಹುಮಾನಗಳು: ತಲಾ ರೂ. 1000
- ಮೊದಲ ಬಹುಮಾನ: ರೂ. 6000
- ಎರಡನೆ ಬಹುಮಾನ: ರೂ. 4000
- ಮೂರನೆಯ ಬಹುಮಾನ: ರೂ. 3000
- ಎರಡು ಪ್ರೋತ್ಸಾಹಕ ಬಹುಮಾನಗಳು: ತಲಾ ರೂ. 1000
ನಿಮ್ಮ ಕತೆ ತಲುಪಲು ಕೊನೆಯ ದಿನಾಂಕ:
ಆಗಸ್ಟ್ 31, 2013
ಆಗಸ್ಟ್ 31, 2013
ಸೆಪ್ಟೆಂಬರ್ ತಿಂಗಳಿನಲ್ಲಿ ಕತೆಗಳ ಮೌಲ್ಯಮಾಪನ ಮಾಡಿ ಗಾಂಧಿ ಜಯಂತಿಯ ಸಂದರ್ಭದಲ್ಲಿ
ಬಹುಮಾನ ನೀಡಲಾಗುತ್ತದೆ. ಬಹುಮಾನ ಪಡೆದ ಕತೆಗಳು ನಂತರ ವರ್ತಮಾನ.ಕಾಮ್‌ನಲ್ಲಿ
ಪ್ರಕಟವಾಗಲಿವೆ.
ಕತೆಗಳನ್ನು ಕಳುಹಿಸಬೇಕಾಗದ ಇಮೇಲ್ ವಿಳಾಸ:
editor@vartamaana.com
editor@vartamaana.com
ಹಾಗೆಯೇ, ಈ ಪ್ರಕಟಣೆ ಗೊತ್ತಿಲ್ಲದೇ ಇರಬಹುದಾದ ತಮ್ಮ ಕತೆಗಾರ ಸ್ನೇಹಿತರಿಗೂ ದಯವಿಟ್ಟು ಇದನ್ನು ತಲುಪಿಸಿ ಮತ್ತು ತಿಳಿಸಿ ಎಂದು ವಿನಂತಿಸುತ್ತೇನೆ.
ಧನ್ಯವಾದಗಳು,
ರವಿ ಕೃಷ್ಣಾರೆಡ್ಡಿ
ರವಿ ಕೃಷ್ಣಾರೆಡ್ಡಿ
No comments:
Post a Comment