- ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಪೂರ್ವ ನಿಗದಿತ ಪಟ್ಟಿಯಲ್ಲಿರುವವರೇ ಆಯ್ಕೆಯಾಗಿದ್ದು ಮೊದಲೇ ಹರಡಿದ್ದ ಸುದ್ದಿ ಖರೆ ಆಗಿದೆ..!
ಖೇದದ ಸಂಗತಿ ಎಂದರೆ ನೇಮಕಾತಿಯಲ್ಲಿ ಅನ್ಯಾಯವಾಗುತ್ತಿರುವ ಸುಳಿವನ್ನು ರಾಜ್ಯಪಾಲ, ವಿವಿ ಸಿಂಡಿಕೇಟ್ ಸದಸ್ಯರಿಗೆ ಲಿಖೀತವಾಗಿ ಮಾಹಿತಿ ನೀಡಿದರೂ ಅರ್ಹರಿಗೆ ಮಾತ್ರ ನ್ಯಾಯ ದೊರೆತಿಲ್ಲ. ವಿವಿ ಆಂತರಿಕ ಶಕ್ತಿಗಳೇ ಮೇಲುಗೈ ಸಾಧಿಸಿವೆ.
ವಿವಿಧ ವಿಷಯಗಳ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಯಲ್ಲಿ ಪಾರದರ್ಶಕತೆ ಇಲ್ಲ ಎಂಬ ಕೂಗನ್ನು ಯಾರೊಬ್ಬರೂ ಗಂಭೀರ ಪರಿಗಣಿಸದೇ ಹೋಗಿದ್ದರಿಂದ ಅರ್ಹತೆ, ಅನುಭವಗಳು ಗಾಳಿಗೆ ತೂರಲ್ಪಟ್ಟಿವೆ. ಹುದ್ದೆ ಪಡೆಯುತ್ತೇವೆಂದು ನಂಬಿದವರು, ಸಂದರ್ಶನದಲ್ಲಿ ಉತ್ತಮವಾಗಿ ಉತ್ತರ ನೀಡಿದ್ದೇವೆಂಬ ಆತ್ಮವಿಶ್ವಾಸ ಹೊಂದಿದರು ನಿರಾಸೆ ಪಡುವಂತಾಗಿದೆ. ಇಂತಹ ಹುದ್ದೆಗೆ ಇಂತಹವರೇ ನೇಮಕಾತಿ ಆಗುತ್ತಾರೆಂಬ ಸುದ್ದಿಯಲ್ಲಿ ಇದ್ದವರಿಗೇ ಪಟ್ಟ ನೀಡಿದ ಕೀರ್ತಿಗೆ ವಿವಿ ಭಾಜನವಾಗಿದೆ!
ಅರ್ಹತೆ, ಅನುಭವದಿಂದ ಹುದ್ದೆ ದೊರೆಯುತ್ತದೆಂಬ ಆತ್ಮವಿಶ್ವಾಸ ಹೊಂದಿದವರು ತಮಗಿಂತ ಕಡಿಮೆ ಅರ್ಹರಾದವರಿಗೆ ಹುದ್ದೆ ಭಾಗ್ಯ ದೊರೆತಿದ್ದು ಕಂಡು ಮಾನಸಿಕವಾಗಿ ಕುಗ್ಗಿ ಹೋಗಿ ವಿವಿಗೆ ಹಿಡಿಶಾಪ ಹಾಕುವಂತಾಗಿದೆ.
ಇದಕ್ಕೆ ಸಾಕ್ಷಿಯೆಂಬಂತೆ ಸಮಾಜಶಾಸ್ತ್ರ ವಿಭಾಗದಲ್ಲಿ ಸಹ ಪ್ರಾಧ್ಯಾಪಕ ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಜ. 12ರಂದು ಸಂದರ್ಶನ ನಡೆದಿತ್ತು. ಸಂದರ್ಶನಕ್ಕೆ ಮೊದಲೇ ಈ ಎರಡೂ ಹುದ್ದೆಗಳಿಗೆ ಯಾರು ಆಯ್ಕೆ ಆಗುತ್ತಾರೆ ಎಂಬ ಸುದ್ದಿ ಹರಡಿತ್ತೋ ಅವರ ಹೆಸರುಗಳೆ ಆಯ್ಕೆ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದು, ಅವರೇ ಹುದ್ದೆ ಅಲಂಕರಿಸಿದ್ದಾರೆ.
ವಿವಿಯಲ್ಲಿನ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೆಲವರು ಜ. 16ರಂದೇ ವಿವಿಯ ಎಲ್ಲ ಸಿಂಡಿಕೇಟ್ ಸದಸ್ಯರಿಗೆ ಪತ್ರ ಬರೆದು ಸಮಾಜಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಹುದ್ದೆಗೆ ಇಂತಹವರೇ ಆಯ್ಕೆ ಆಗುತ್ತಾರೆ ಎಂಬ ಅನುಮಾನ ಇದೆ. ಆಯ್ಕೆಯ ಪೂರ್ವನಿರ್ಧಾರ ಆಗಿದ್ದರೆ, ಹುದ್ದೆಗೆ ಅರ್ಜಿ ಆಹ್ವಾನಿಸಿದ್ದೇಕೆ? ಸಂದರ್ಶನದ ನಾಟಕ ಯಾಕೆ ಬೇಕು ಎಂದು ಪ್ರಶ್ನಿಸಿ ಮನದಾಳದ ನೋವು ತೋಡಿಕೊಂಡಿದ್ದರು.
ಪತ್ರದಲ್ಲಿ ಆಯ್ಕೆಯಾಗಲಿರುವ ಅಭ್ಯರ್ಥಿ ಹೆಸರು ನಮೂದಿಸಿ ಹುದ್ದೆ ಆಕಾಂಕ್ಷಿ ಅಭ್ಯರ್ಥಿಯೊಬ್ಬರು ಜ. 17ರಂದು ರಾಜ್ಯಪಾಲ ಹಂಸರಾಜ ಭಾರದ್ವಾಜ್ ಅವರಿಗೂ ಮನವಿ ಕಳುಹಿಸಿದ್ದರು. ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಪಿಎಚ್.ಡಿ, ನೆಟ್-ಸೆಟ್ ಮುಗಿಸಿದ, 20 ವರ್ಷಕ್ಕಿಂತ ಹೆಚ್ಚಿನ ಬೋಧನಾ ಅನುಭವ ಹೊಂದಿದವರು ಸಂದರ್ಶನದಲ್ಲಿ ಭಾಗಿಯಾಗಿದ್ದರೂ, ಕೇವಲ ಸೆಟ್ ಮಾತ್ರ ಮುಗಿಸಿದ ವ್ಯಕ್ತಿ ಆಯ್ಕೆ ಆಗುವ ಸುದ್ದಿ ಹರಡಿದೆ ಎಂದು ದೂರಿನಲ್ಲಿ ತಿಳಿಸಿದ್ದರು.
ಜ. 25ರಂದು ನಡೆದ ವಿವಿ ಸಿಂಡಿಕೇಟ್ ಸಭೆಯಲ್ಲಿ ಆಯ್ಕೆಯಾದವರ ಪಟ್ಟಿ ಮಂಡಿಸಲ್ಪಟ್ಟಾಗ ಯಾರು ಹುದ್ದೆ ಪಡೆಯುತ್ತಾರೆಂದು ಆರೋಪಿಸಲಾಗಿತ್ತೋ ಅವರೇ ಹುದ್ದೆಗೆ ಆಯ್ಕೆಯಾಗಿದ್ದುದು ದೃಢೀಕರಿಸಲ್ಪಟ್ಟಿತು!
ಪೆನ್ಸಿಲ್‌ನಿಂದ ನಮೂದನೆ ಯಾಕೆ?: ರಾಣಿ ಚನ್ನಮ್ಮ ವಿವಿಯ ಹುದ್ದೆಗಳ ಆಯ್ಕೆಗೆ ನಡೆದ ಸಂದರ್ಶನ ಬಹುಶಃ ಅಂಗನವಾಡಿ ಕಾರ್ಯಕರ್ತೆಯರ ಆಯ್ಕೆ ಸಂದರ್ಶನಕ್ಕಿಂತಲೂ ಕಡೆಯಾಗಿ ನಡೆಯಿತು ಎಂದು ಹೇಳಲಾಗುತ್ತಿದೆ.
ಮಹತ್ವದ ಹುದ್ದೆಗಳಿಗೆ ಅದಾಗಲೇ ಹೆಸರುಗಳು ನಿಗದಿಯಾಗಿದ್ದರಿಂದಲೋ ಏನೋ ನೇಮಕಾತಿ ಸಂದರ್ಶನಕ್ಕೆ ಬಂದ ಅಭ್ಯರ್ಥಿಗಳನ್ನು ತಲಾ ಕೆಲವೇ ನಿಮಿಷಗಳಂತೆ ಸಂದರ್ಶಿಸಿ ಕಳುಹಿಸಲಾಗಿದೆ. ಸಮಾಜಶಾಸ್ತ್ರ ವಿಭಾಗದಲ್ಲಿ 45 ಜನರನ್ನು ಕೇವಲ ಆರು ತಾಸಿನಲ್ಲಿ ಸಂದರ್ಶಿಸಿ ಕಳುಹಿಸಿರುವುದು ವಿವಿ ದಾಖಲೆಯೇ ಸರಿ ಎನ್ನುವುದು ಅಭ್ಯರ್ಥಿಗಳ ಅನಿಸಿಕೆ. ಇದರಲ್ಲಿ ಭೋಜನ ಸಮಯವೂ ಸೇರಿದೆ ಎನ್ನುತ್ತಾರೆ ಅಭ್ಯರ್ಥಿಗಳು.
ಅರ್ಥಶಾಸ್ತ್ರ ವಿಭಾಗದಲ್ಲಿ ಸಂದರ್ಶನಕ್ಕೆ ಆಗಮಿಸಿದ್ದ ಅಭ್ಯರ್ಥಿಯೊಬ್ಬರನ್ನು ಸಂದರ್ಶಿಸಿದವರು, ಅಧ್ಯಯನ ಕೇಂದ್ರಗಳನ್ನು ಪದವಿ ಕಾಲೇಜುಗಳಲ್ಲಿಯೇ ವಿವಿ ಆರಂಭಿಸುತ್ತಿದೆ. ಹೀಗಿರುವಾಗ ಪಿಎಚ್‌ಡಿ ಆದ ನೀವು ಅಲ್ಲಿಯೇ ಪಾಠ ಮಾಡಿ. ಇಲ್ಲಿಗೆ ಯಾಕೆ ಬರುತ್ತೀರಿ ಎನ್ನುವುದಾಗಿ ಹೇಳಿ ವಾಪಸು ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.
ಸಂದರ್ಶನಕ್ಕೆ ಹೋದ ಅಭ್ಯರ್ಥಿಗಳು ಮಂಡಿಸಿದ ಪ್ರಬಂಧಗಳ ದಾಖಲಾತಿಗಳನ್ನು, ಉಪನ್ಯಾಸದ ಮಾಹಿತಿಯನ್ನು, ವಿವಿಧ ಸಾಧನೆಗಳ ದಾಖಲೆಗಳನ್ನು ಪರಿಶೀಲಿಸುವಾಗ ನೋಂದಣಿಯನ್ನು ಪೆನ್ಸಿಲ್‌ನಿಂದ ಮಾಡಿಕೊಂಡು ಅಭ್ಯರ್ಥಿಗಳ ಸಹಿ ಪಡೆಯಲಾಗಿದೆ. ಪಿನ್ಸಿಲ್‌ನಿಂದ ನಮೂದಿಸಿರುವುದೇಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ ಎಂಬುದು ಕೆಲ ಅಭ್ಯರ್ಥಿಗಳ ಅನಿಸಿಕೆ. ಸಂದರ್ಶನದಲ್ಲಿ ಉತ್ತಮವಾಗಿ ಉತ್ತರಿಸಿದ ಕೆಲ ಅಭ್ಯರ್ಥಿಗಳಿಗೆ ಹುದ್ದೆ ನೀಡಿದರೆ ಏನು ಅಭಿವೃದ್ಧಿ ಕೈಗೊಳ್ಳುತ್ತೀರಿ ಎಂಬ ನೀಲಿನಕ್ಷೆ ತೋರಿಸಿ ಎಂದು ಕೇಳಲಾಗಿದೆಯಂತೆ.
ಡೀಸೆಂಟ್ ನೋಟ್‌ಗೂ ಡೋಂಟ್ ಕೇರ್: ವಿವಿಧ ವಿಷಯಗಳ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆ ನೇಮಕಾತಿಯಲ್ಲಿ ಅರ್ಹರಿಗೆ ಆದ ಅನ್ಯಾಯ, ಪಾರದರ್ಶಕತೆ ಕೊರತೆ ಬಗೆಗೆ ಆಕ್ಷೇಪವೆತ್ತಿ ಜ. 25ರಂದು ನಡೆದ ವಿವಿ ಸಿಂಡಿಕೇಟ್ ಸಭೆಯಲ್ಲಿ ಐವರು ಸದಸ್ಯರು ಡೀಸೆಂಟ್ ನೋಟ್ ಸಲ್ಲಿಸಿದ್ದರು. ಕೆಲ ಸದಸ್ಯರು ಅಸಮರ್ಥರ ನೇಮಕಾತಿ ವಿಚಾರವಾಗಿ ತರಾಟೆಗೆ ತೆಗೆದುಕೊಂಡಿದ್ದರು ಎನ್ನಲಾಗಿದೆ.
ಇದಾವುದನ್ನೂ ಗಂಭೀರವಾಗಿ ಪರಿಗಣಿಸದ ವಿವಿ ಕುಲಪತಿಯವರು ತಮ್ಮದೇ ನಿರ್ಧಾರ ಪ್ರಕಟಿಸಿ ನೇಮಕಾತಿ ಪಟ್ಟಿ ಮಂಡಿಸಿ ಅನ್ಯಾಯವಾದವರು ಬೇಕಾದರೆ ಕಾನೂನು ಮೊರೆ ಹೋಗಲಿ ಎಂಬ ಹೇಳಿಕೆ ನೀಡಿದರು ಎಂದು ಹೇಳಲಾಗುತ್ತಿದೆ.
ಸಭೆ ನಂತರ ಡೀಸೆಂಟ್ ನೋಟ್ ಮಂಡಿಸಿದ ಸದಸ್ಯರ ಮನವೊಲಿಕೆಗೆ ಕುಲಪತಿ ಯತ್ನಿಸಿದರು ಎಂದು ಹೇಳಲಾಗುತ್ತಿದ್ದು, ಇಬ್ಬರು ಸದಸ್ಯರಿಂದ ಪೂರಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎನ್ನಲಾಗಿದೆ. ಮೂವರು ಸದಸ್ಯರು ಮಾತ್ರ ತಮ್ಮ ನಿಲುವಿಗೆ ಬದ್ಧರಾಗಿರುವುದಾಗಿ ಹೇಳಲಾಗುತ್ತಿದೆ.
ನೇಮಕಾತಿ ಅನ್ಯಾಯದ ಬಗ್ಗೆ ರಾಜ್ಯಪಾಲರಿಗೂ ದೂರು ಹೋಗಿದೆ. ಆದರೆ, ಉತ್ತರ ಕರ್ನಾಟಕದ ವಿವಿಗಳ ಘಟಿಕೋತ್ಸವ ಇನ್ನಿತರ ಸಮಾರಂಭಗಳಿಂದ ದೂರವೇ ಉಳಿದಿರುವ ರಾಜ್ಯಪಾಲರು ಅನ್ಯಾಯದ ವಿರುದ್ಧದ ದೂರನ್ನು ದೂರವೇ ಇಟ್ಟು ಬಿಟ್ಟರೆ ಎಂಬ ಅನುಮಾನ ಅನೇಕರನ್ನು ಕಾಡುತ್ತಿದೆ.ಅಮರೇಗೌಡ ಗೋನವಾರ, ಉದಯವಾಣಿ- | Jan 31, 2012
Showing posts with label ಉಪನ್ಯಾಸಕರು. Show all posts
Showing posts with label ಉಪನ್ಯಾಸಕರು. Show all posts
Friday, August 10, 2012
ಚನ್ನಮ್ಮ ವಿವಿ ನೇಮಕಾತಿ ಕರ್ಮಕಾಂಡ !
Monday, July 09, 2012
157 ಸ್ನಾತಕೋತ್ತರ, 67 ಪದವಿ ಹುದ್ದೆಗಳು ಖಾಲಿ:ಬೋಧಕರ ಕೊರತೆಯಿಂದ ಬಳಲುತ್ತಿದೆ ಕರ್ನಾಟಕ ವಿಶ್ವವಿದ್ಯಾಲಯ !
ಧಾರವಾಡ: ಭಾರತಕ್ಕೆ ಸ್ವಾತಂತ್ರ್ಯ ಬಂದ ಮೂರು ವರ್ಷಕ್ಕೇ (1950) ಆರಂಭವಾದ, ರಾಜ್ಯದ
ಅತ್ಯಂತ ಹಳೆಯ ವಿವಿಗಳಲ್ಲಿ ಒಂದಾದ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಇದೀಗ
ಪ್ರಾಧ್ಯಾಪಕರು/ ಉಪನ್ಯಾಸಕರ ಕೊರತೆಯಿಂದ ನಲುಗುತ್ತಿದೆ.
ಬೆಳಗಾವಿಯಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಆರಂಭವಾದ ಬಳಿಕ ಕವಿವಿ ವ್ಯಾಪ್ತಿ
ಧಾರವಾಡ, ಹಾವೇರಿ, ಗದಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಸೀಮಿತವಾಗಿದ್ದು 300
ಕಾಲೇಜುಗಳು ಕವಿವಿಯೊಂದಿಗೆ ಸಂಯೋಜನೆ ಹೊಂದಿವೆ. ಕವಿವಿಯು ಹಾವೇರಿ, ಕಾರವಾರ ಹಾಗೂ ಗದಗ
ನಗರಗಳಲ್ಲಿ ಸ್ನಾತಕೋತ್ತರ ಕೇಂದ್ರಗಳನ್ನು ಆರಂಭಿಸಿದ್ದು, ಅಲ್ಲಿಯೂ ಪೂರ್ಣ ಪ್ರಮಾಣದ
ಕಾಯಂ ಉಪನ್ಯಾಸಕರಿಲ್ಲ.
ಕೆಲ ಉಪನ್ಯಾಸಕರು ಧಾರವಾಡದಿಂದಲೇ ಆಯಾ ಸ್ನಾತಕೋತ್ತರ ಕೇಂದ್ರಗಳಿಗೆ ಹೋಗಿ ತರಗತಿಗಳನ್ನು
ನಡೆಸುತ್ತಿದ್ದಾರೆ.ಒಂದು ಅಂದಾಜಿನಂತೆ ವಿವಿಯ ಸ್ನಾತಕೋತ್ತರ ವಿಭಾಗಗಳಿಗೆ 157 ಹಾಗೂ
ಪದವಿ ಕಾಲೇಜುಗಳಿಗೆ 67 ಮಂಜೂರಾದ ಹುದ್ದೆಗಳು ಖಾಲಿ ಉಳಿದಿವೆ. ಪ್ರಾಧ್ಯಾಪಕರು
ನಿವೃತ್ತಿ ಹೊಂದುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಅಧ್ಯಯನದ ಮೇಲೆ ಪರಿಣಾಮ
ಬೀರುತ್ತಿದೆ ಎಂದು ವಿವಿಯ ಕನ್ನಡ ವಿಭಾಗದ ಪ್ರಾಧ್ಯಾಪಕರೊಬ್ಬರು ಆತಂಕ
ವ್ಯಕ್ತಪಡಿಸಿದರು.
ಕಳೆದ ತಿಂಗಳು 43 ಬ್ಯಾಕ್‌ಲಾಗ್ ಹುದ್ದೆಗಳಲ್ಲಿ 30 ಹುದ್ದೆಗಳನ್ನು ಭರ್ತಿ
ಮಾಡಿದ್ದರಿಂದ ಬೋಧಕರ ಮೇಲಿದ್ದ ಒತ್ತಡವನ್ನು ಕಡಿಮೆ ಮಾಡಿದೆ. ಉಳಿದ 13 ಹುದ್ದೆಗಳಿಗಾಗಿ
ನಡೆದ ಸಂದರ್ಶನದಲ್ಲಿ ಸೂಕ್ತ ಅಭ್ಯರ್ಥಿಗಳು ದೊರೆಯದಿರುವುದರಿಂದ ಮತ್ತೆ ಪ್ರಕಟಣೆ ನೀಡಿ
ಭರ್ತಿ ಮಾಡಿಕೊಳ್ಳಲು ವಿವಿ ನಿರ್ಧರಿಸಿದೆ.
ಒಂದು ವಿಭಾಗಕ್ಕೆ ಕನಿಷ್ಟ ಆರು ಮಂದಿ ಬೋಧಕ ಸಿಬ್ಬಂದಿ ಅಗತ್ಯವಿದೆ. ಆದರೆ ಇದೀಗ ಸರಾಸರಿ
ಮೂರರಿಂದ ನಾಲ್ಕು ಮಂದಿ ಪ್ರಾಧ್ಯಾಪಕ/ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ.
ಉದಾಹರಣೆಗೆ ವಿವಿಯ ಇಂಗ್ಲಿಷ್ ವಿಭಾಗದಲ್ಲಿ ನಾಲ್ಕು ಮಂದಿ ಕಾಯಂ ಬೋಧಕ ಸಿಬ್ಬಂದಿ
ಇದ್ದಾರೆ.
28 ವರ್ಷಗಳಷ್ಟು ಹಳೆಯದಾದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗಕ್ಕೆ ಈಗಲೂ ಮೂರು
ಮಂದಿ ಕಾಯಂ ಪ್ರಾಧ್ಯಾಪಕ/ ಉಪನ್ಯಾಸಕರು ಇದ್ದು, ಒಬ್ಬರು ಅತಿಥಿ ಉಪನ್ಯಾಸಕರಿದ್ದಾರೆ.
ನಿರ್ವಹಣಾ ವಿಭಾಗ (ಎಂಬಿಎ)ದಲ್ಲಿ ಏಳು ಮಂಜೂರಾತಿ ಹುದ್ದೆಗಳಿದ್ದರೆ, ನಾಲ್ಕು ಮಂದಿ
ಕಾಯಂ ಹಾಗೂ ಮೂವರು ಅತಿಥಿ ಉಪನ್ಯಾಸಕರಿದ್ದಾರೆ. ಅತಿಥಿ ಉಪನ್ಯಾಸಕರಿಗೆ ವಿವಿ ತನ್ನ
ಆಂತರಿಕ ನಿಧಿಯನ್ನು ಬಳಸಿಕೊಂಡು ವೇತನ ಪಾವತಿ ಮಾಡುತ್ತಿದೆ.
ಹುದ್ದೆ ಭರ್ತಿಗೆ ಪ್ರಸ್ತಾವನೆ: ಪ್ರೊ.ವಾಲೀಕಾರ
ಉಪನ್ಯಾಸಕರ ಕೊರತೆಯ ಕುರಿತು `ಪ್ರಜಾವಾಣಿ`ಯೊಂದಿಗೆ ಮಾತನಾಡಿದ ಕರ್ನಾಟಕ ವಿವಿ ಕುಲಪತಿ
ಪ್ರೊ.ಎಚ್.ಬಿ.ವಾಲೀಕಾರ, `ಮಂಜೂರಾದ ಹುದ್ದೆಗಳನ್ನು ಭರ್ತಿ ಮಾಡುವಂತೆ ಈಗಾಗಲೇ ಉನ್ನತ
ಶಿಕ್ಷಣ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಇಲಾಖೆಯ ಪ್ರಧಾನ ಕಾರ್ಯದರ್ಶಿ
ಸಿದ್ದಯ್ಯ ಈ ಪ್ರಸ್ತಾವನೆಯನ್ನು ಹಣಕಾಸು ಇಲಾಖೆಗೆ ಕಳುಹಿಸಿದ್ದಾಗಿ ತಿಳಿಸಿದ್ದಾರೆ.
ಹೆಚ್ಚು ಹುದ್ದೆಗಳನ್ನು ಮಂಜೂರು ಮಾಡುವಂತೆ ಕೋರಿ ಯುಜಿಸಿಗೂ ಮನವಿ ಸಲ್ಲಿಸಲಾಗಿದೆ.
ಉಪನ್ಯಾಸಕರಿಗೆ ವಿವಿ ಧನಸಹಾಯಕ ಆಯೋಗವು ವೇತನ ನೀಡಿದರೂ ಸಾಕು, ಉಳಿದದ್ದನ್ನು ವಿವಿಯೇ
ನಿರ್ವಹಣೆ ಮಾಡಲಿದೆ` ಎಂದರು.
`ಬೋಧಕರ ಕೊರತೆ ವಿದ್ಯಾರ್ಥಿಗಳ ಅಧ್ಯಯನಕ್ಕೆ ತೊಡಕಾಗಬಾರದು ಎಂದು ಉದ್ದೇಶದಿಂದ ಅತಿಥಿ
ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಹಣಕಾಸು ಪ್ರಸ್ತಾವನೆಯಿಂದ ಹುದ್ದೆ
ನೇಮಕಕ್ಕೆ ಅನುಮತಿ ದೊರೆತ ಕೂಡಲೇ ಮುಂದಿನ ಪ್ರಕ್ರಿಯೆ ಆರಂಭಿಸುತ್ತೇವೆ. ಕಾಯಂ
ಸಿಬ್ಬಂದಿ ನೇಮಕವಾಗಬೇಕಾದರೆ ಕನಿಷ್ಟ ಒಂದು ವರ್ಷ ಬೇಕಾಗಬಹುದು` ಎಂದು ತಿಳಿಸಿದರು.
ಕೃಪೆ : ಪ್ರಜಾವಾಣಿ ವಾರ್ತೆ/ಮನೋಜ್‌ಕುಮಾರ್ ಗುದ್ದಿ May 03, 2012
Monday, January 30, 2012
ಪ್ರಖರ ವಿದ್ವಾಂಸ ಎಲ್.ಬಸವರಾಜು ನಿಧನ
ಮೈಸೂರು: ಹಿರಿಯ ಸಾಹಿತಿ ಲಿಂಗಪ್ಪ ಬಸವರಾಜು (93) ಭಾನುವಾರ ರಾತ್ರಿ ಇಲ್ಲಿ ಸ್ವಗೃಹದಲ್ಲಿ ನಿಧನರಾದರು.
ಮೂಲತಃ ಕೋಲಾರ ಜಿಲ್ಲೆ ಇಡಗೂರು ಗ್ರಾಮದವರಾದ ಅವರು 1919ರಲ್ಲಿ ಜನಿಸಿದ್ದರು. 40ಕ್ಕೂ ಹೆಚ್ಚು ಕೃತಿಗಳನ್ನು ಬರೆದಿರುವ ಅವರು ಚಿತ್ರದುರ್ಗದಲ್ಲಿ ನಡೆದ 75ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
1977ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ, 1994ರಲ್ಲಿ ರಾಜ್ಯೋತ್ಸವ ಪ್ರಶಸ್ತಿ, 2000ರಲ್ಲಿ ಭಾಷಾಂತರಕ್ಕೆ ಸಾಹಿತ್ಯ ಅಕಾಡೆಮಿ ಬಹುಮಾನ, 2005ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಭಾಷಾ ಸಮ್ಮಾನ್, ಬಸವ ಪುರಸ್ಕಾರ, ನಾಡೋಜ ಪ್ರಶಸ್ತಿ, ಪಂಪ ಪ್ರಸಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಗೌರವಗಳಿಗೆ ಅವರು ಪಾತ್ರರಾಗಿದ್ದರು.
ಮೈಸೂರು ವಿವಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ 32 ವರ್ಷಗಳ ಕಾಲ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಎಲ್.ಬಸವರಾಜು ಅವರು, ವಚನಗಳ ಸಂಶೋಧನೆ, ಗ್ರಂಥಸಂಪಾದನೆ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
ಇಡಗೂರು, ಸಿದ್ದಗಂಗೆ ಮತ್ತು ಬೆಂಗಳೂರುಗಳಲ್ಲಿ ಹೈಸ್ಕೂಲುವರೆಗಿನ ಶಿಕ್ಷಣ ಪಡೆದ ನಂತರ ವಿಶೇಷ ವ್ಯಾಸಂಗಕ್ಕಾಗಿ ಮೈಸೂರಿಗೆ ತೆರಳಿದ ಎಲ್.ಬಸವರಾಜು, 1946 ರಲ್ಲಿ ಬಿಎ ಆನರ್ಸ್ ಮತ್ತು 1951 ರಲ್ಲಿ ಎಂ.ಎ. ಪದವಿ ಪಡೆದರು. ಸ್ವಲ್ಪ ಕಾಲ, ದಾವಣಗೆರೆ ಮತ್ತು ಮೈಸೂರಿನ ಯುವರಾಜ ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ನಂತರ, ಬಸವರಾಜು ಅವರು ಮೈಸೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯನ್ನು ಸೇರಿದರು.(1967) 1979 ರಲ್ಲಿ ಸೇವೆಯಿಂದ ನಿವತ್ತರಾದರು.
ಎಲ್.ಬಸವರಾಜು ಅವರು ಗ್ರಂಥಸಂಪಾದನೆಯ ಕ್ಷೇತ್ರದಲ್ಲಿ, ಅನೇಕ ಹೊಸ ಆವಿಷ್ಕಾರಗಳನ್ನು ಮಾಡಿದ್ದಾರೆ; ವಿಶಿಷ್ಟವಾದ ದೃಷ್ಟಿಕೋನಗಳನ್ನು ಅಳವಡಿಸಿಕೊಂಡಿದ್ದಾರೆ. ಕನ್ನಡ ಸಾಹಿತ್ಯದ ಅಭಿಜಾತ ಕೃತಿಗಳು ಮತ್ತು ಜ್ಞಾನದ ಆಕರಗಳನ್ನು, ಪಂಡಿತರೇನೂ ಅಲ್ಲದ ಜನಸಾಮಾನ್ಯರ ಅಳವಿಗೆ ನಿಲುಕುವಂತೆ ನೀಡಬೇಕೆನ್ನುವುದೇ ಅವರ ಗುರಿ.
ಆದ್ದರಿಂದಲೇ ಅವರು ಅನೇಕ ಮಹಾಕಾವ್ಯಗಳ ಸರಳವಾದ ಗದ್ಯರೂಪಗಳನ್ನು ಸಿದ್ಧಪಡಿಸಿ ಕೊಟ್ಟಿದ್ದಾರೆ. ಪ್ರಾಚೀನ ಕಾವ್ಯಗಳಲ್ಲಿ ಬರುವ ಪದ್ಯಗಳನ್ನು, ಬಿಡಿ ಪದಗಳಾಗಿ ಒಡೆದು, ಗದ್ಯಸಮೀಪವಾದ ವಾಕ್ಯರಚನೆಯಲ್ಲಿ ಮರುಜೋಡಣೆ ಮಾಡುವ ಪ್ರಯತ್ನವನ್ನೂ ಅವರು ಮಾಡಿದ್ದಾರೆ. ಅಗತ್ಯವಿರುವ ಕಡೆಗೆ ಸೂಕ್ತವಾದ ಲೇಖನಚಿಹ್ನೆಗಳನ್ನು ಕೊಟ್ಟಿದ್ದಾರೆ.
ಮೂಲತಃ ಕೋಲಾರ ಜಿಲ್ಲೆ ಇಡಗೂರು ಗ್ರಾಮದವರಾದ ಅವರು 1919ರಲ್ಲಿ ಜನಿಸಿದ್ದರು. 40ಕ್ಕೂ ಹೆಚ್ಚು ಕೃತಿಗಳನ್ನು ಬರೆದಿರುವ ಅವರು ಚಿತ್ರದುರ್ಗದಲ್ಲಿ ನಡೆದ 75ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
1977ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ, 1994ರಲ್ಲಿ ರಾಜ್ಯೋತ್ಸವ ಪ್ರಶಸ್ತಿ, 2000ರಲ್ಲಿ ಭಾಷಾಂತರಕ್ಕೆ ಸಾಹಿತ್ಯ ಅಕಾಡೆಮಿ ಬಹುಮಾನ, 2005ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಭಾಷಾ ಸಮ್ಮಾನ್, ಬಸವ ಪುರಸ್ಕಾರ, ನಾಡೋಜ ಪ್ರಶಸ್ತಿ, ಪಂಪ ಪ್ರಸಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಗೌರವಗಳಿಗೆ ಅವರು ಪಾತ್ರರಾಗಿದ್ದರು.
ಮೈಸೂರು ವಿವಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ 32 ವರ್ಷಗಳ ಕಾಲ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಎಲ್.ಬಸವರಾಜು ಅವರು, ವಚನಗಳ ಸಂಶೋಧನೆ, ಗ್ರಂಥಸಂಪಾದನೆ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
ಇಡಗೂರು, ಸಿದ್ದಗಂಗೆ ಮತ್ತು ಬೆಂಗಳೂರುಗಳಲ್ಲಿ ಹೈಸ್ಕೂಲುವರೆಗಿನ ಶಿಕ್ಷಣ ಪಡೆದ ನಂತರ ವಿಶೇಷ ವ್ಯಾಸಂಗಕ್ಕಾಗಿ ಮೈಸೂರಿಗೆ ತೆರಳಿದ ಎಲ್.ಬಸವರಾಜು, 1946 ರಲ್ಲಿ ಬಿಎ ಆನರ್ಸ್ ಮತ್ತು 1951 ರಲ್ಲಿ ಎಂ.ಎ. ಪದವಿ ಪಡೆದರು. ಸ್ವಲ್ಪ ಕಾಲ, ದಾವಣಗೆರೆ ಮತ್ತು ಮೈಸೂರಿನ ಯುವರಾಜ ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ನಂತರ, ಬಸವರಾಜು ಅವರು ಮೈಸೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯನ್ನು ಸೇರಿದರು.(1967) 1979 ರಲ್ಲಿ ಸೇವೆಯಿಂದ ನಿವತ್ತರಾದರು.
ಎಲ್.ಬಸವರಾಜು ಅವರು ಗ್ರಂಥಸಂಪಾದನೆಯ ಕ್ಷೇತ್ರದಲ್ಲಿ, ಅನೇಕ ಹೊಸ ಆವಿಷ್ಕಾರಗಳನ್ನು ಮಾಡಿದ್ದಾರೆ; ವಿಶಿಷ್ಟವಾದ ದೃಷ್ಟಿಕೋನಗಳನ್ನು ಅಳವಡಿಸಿಕೊಂಡಿದ್ದಾರೆ. ಕನ್ನಡ ಸಾಹಿತ್ಯದ ಅಭಿಜಾತ ಕೃತಿಗಳು ಮತ್ತು ಜ್ಞಾನದ ಆಕರಗಳನ್ನು, ಪಂಡಿತರೇನೂ ಅಲ್ಲದ ಜನಸಾಮಾನ್ಯರ ಅಳವಿಗೆ ನಿಲುಕುವಂತೆ ನೀಡಬೇಕೆನ್ನುವುದೇ ಅವರ ಗುರಿ.
ಆದ್ದರಿಂದಲೇ ಅವರು ಅನೇಕ ಮಹಾಕಾವ್ಯಗಳ ಸರಳವಾದ ಗದ್ಯರೂಪಗಳನ್ನು ಸಿದ್ಧಪಡಿಸಿ ಕೊಟ್ಟಿದ್ದಾರೆ. ಪ್ರಾಚೀನ ಕಾವ್ಯಗಳಲ್ಲಿ ಬರುವ ಪದ್ಯಗಳನ್ನು, ಬಿಡಿ ಪದಗಳಾಗಿ ಒಡೆದು, ಗದ್ಯಸಮೀಪವಾದ ವಾಕ್ಯರಚನೆಯಲ್ಲಿ ಮರುಜೋಡಣೆ ಮಾಡುವ ಪ್ರಯತ್ನವನ್ನೂ ಅವರು ಮಾಡಿದ್ದಾರೆ. ಅಗತ್ಯವಿರುವ ಕಡೆಗೆ ಸೂಕ್ತವಾದ ಲೇಖನಚಿಹ್ನೆಗಳನ್ನು ಕೊಟ್ಟಿದ್ದಾರೆ.
ಈ ರೀತಿಯ ಪ್ರಯೋಗಗಳಲ್ಲಿ ತೊಡಗಿಕೊಳ್ಳುವುದಕ್ಕಿಂತ ಮುಂಚಿತವಾಗಿಯೂ ಅವರು ಪರಿಶ್ರಮ ವಹಿಸಿ ಗ್ರಂಥಸಂಪಾದನೆ ಮಾಡಿದ್ದರು. ಓಲೆಗರಿಗಳು ಮತ್ತು ಕಾಗದದ ಹಸ್ತಪ್ರತಿಗಳ ನೆರವಿನಿಂದ ಮೂಲಪಠ್ಯವನ್ನು ಗುರುತಿಸುವ ಕೆಲಸದಲ್ಲಿ ಮಗ್ನರಾಗಿದ್ದರು. ಬಸವರಾಜು ಅವರು ಸಂಪಾದನೆ ಮಾಡಹೊರಡುವ ಕತಿಗಳ ಆಯ್ಕೆಯಲ್ಲಿ ಜಾತ್ಯತೀತವಾದ ಧೋರಣೆಯನ್ನು ಹೊಂದಿದ್ದಾರೆ.
`ಆದಿಪುರಾಣ`ದಂತಹ ಜೈನ ಕೃತಿ, `ಬುದ್ಧಚರಿತ`ದಂತಹ ಬೌದ್ಧಕೃತಿ, `ತೊರವೆಯ ರಾಮಾಯಣ`, `ಶಬ್ದಮಣಿದರ್ಪಣ` ಯಾವುದೂ ಅವರ ಅನಾದರಕ್ಕೆ ಗುರಿಯಾಗಿಲ್ಲ. ತಮ್ಮ ಅನಿಸಿಕೆಗಳನ್ನು ಸ್ಪಷ್ಟವಾಗಿ ಮಂಡಿಸಲು ಅವರು ಯಾವಾಗಲೂ ಹಿಂಜರಿದಿಲ್ಲ.
`ಬಸವೇಶ್ವರರ ವಚನಗಳು` `ಅಲ್ಲಮನ ವಚನಚಂದ್ರಿಕೆ` `ಶಿವದಾಸ ಗೀತಾಂಜಲಿ`, `ಬಸವ ವಚನಾಮೃತ`, `ಅಕ್ಕನ ವಚನಗಳು`, `ಅಲ್ಲಮನ ವಚನಗಳು` ಇವು ಬಸವರಾಜು ಅವರು ಸಂಪಾದಿಸಿರುವ ಕೆಲವು ಪ್ರಮುಖ ಗ್ರಂಥಗಳು.
`ಆದಿಪುರಾಣ`ದಂತಹ ಜೈನ ಕೃತಿ, `ಬುದ್ಧಚರಿತ`ದಂತಹ ಬೌದ್ಧಕೃತಿ, `ತೊರವೆಯ ರಾಮಾಯಣ`, `ಶಬ್ದಮಣಿದರ್ಪಣ` ಯಾವುದೂ ಅವರ ಅನಾದರಕ್ಕೆ ಗುರಿಯಾಗಿಲ್ಲ. ತಮ್ಮ ಅನಿಸಿಕೆಗಳನ್ನು ಸ್ಪಷ್ಟವಾಗಿ ಮಂಡಿಸಲು ಅವರು ಯಾವಾಗಲೂ ಹಿಂಜರಿದಿಲ್ಲ.
`ಬಸವೇಶ್ವರರ ವಚನಗಳು` `ಅಲ್ಲಮನ ವಚನಚಂದ್ರಿಕೆ` `ಶಿವದಾಸ ಗೀತಾಂಜಲಿ`, `ಬಸವ ವಚನಾಮೃತ`, `ಅಕ್ಕನ ವಚನಗಳು`, `ಅಲ್ಲಮನ ವಚನಗಳು` ಇವು ಬಸವರಾಜು ಅವರು ಸಂಪಾದಿಸಿರುವ ಕೆಲವು ಪ್ರಮುಖ ಗ್ರಂಥಗಳು.
ಕೃಪೆ : ಪ್ರಜಾವಾಣಿ
ಕನ್ನಡ ಸಾಹಿತ್ಯ ಸಂಪತ್ತು ಎಲ್ ಬಸವರಾಜು ಇನ್ನಿಲ್ಲ
ಎಲ್ ಬಸವರಾಜು ನೆನಪಿನಲ್ಲಿ ಅವರು ಬಿ.ಎಸ್. ನಾರಾಯಣಸ್ವಾಮಿಯವರೊಂದಿಗಿನ ಸಂದರ್ಶನ ಇಲ್ಲಿದೆ :
“ಬರಿಮಾತಿನ ಸಾಹಿತಿ, ಸ್ವಾಮೀಜಿ, ರಾಜಕಾರಣಿಗಳಿಂದ ದೇಶ ಹಾಳು”ಚಿತ್ರದುರ್ಗ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಎಲ್. ಬಸವರಾಜು ಅವರು ಆಯ್ಕೆಯಾದ ಕೂಡಲೇ ಅದುವರೆಗಿದ್ದ ವಿವಾದದ ಹೊಗೆಯೆಲ್ಲವೂ ಒಮ್ಮೆಗೇ ಮಾಯವಾಯಿತು. ಆ ಸ್ಥಾನಕ್ಕೆ ಪ್ರೊಫೆಸರ್ ಎಲ್‌ಬಿ ಅಷ್ಟು ಸೂಕ್ತರು ಹಾಗೂ ವಿವಾದಾತೀತರು. 90ರ ಹರೆಯದಲ್ಲೂ ಗ್ರಂಥ ಸಂಪಾದನೆ ಮತ್ತು ಸೃಜನಶೀಲ ಸಾಹಿತ್ಯದ ಸಹವಾಸದಿಂದ ಅವರು ದೂರವಾಗಿಲ್ಲ. ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಎಲ್‌ಬಿ ಅವರೊಂದಿಗೆ ಬಿ.ಎಸ್. ನಾರಾಯಣಸ್ವಾಮಿ ನಡೆಸಿದ ಸಂದರ್ಶನದ ಆಯ್ದ ಭಾಗ ಇಲ್ಲಿದೆ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನೀವು ಬಹು ಹಿಂದೆಯೇ ಆಯ್ಕೆಯಾಗಬೇಕಿತ್ತು.
ಇದೀಗ ನಾಡೋಜ ಪ್ರಶಸ್ತಿಯೂ ಸಂದಿದೆ. ಈ ಬಗ್ಗೆ…?
ಈ ಪ್ರಶಸ್ತಿಗಳೆಲ್ಲಾ ನಮ್ಮೊಳಗಿನ ಅಹಂಕಾರವನ್ನು ತೃಪ್ತಿಪಡಿಸುತ್ತವೆ ಅಷ್ಟೆ. ಪ್ರಶಸ್ತಿ, ಪದವಿಯನ್ನೆಲ್ಲಾ ನಾನು ಯಾವತ್ತೂ ನಿರೀಕ್ಷಿಸಿದವನಲ್ಲ; ಅದಕ್ಕಾಗಿ ಕೆಲಸ ಮಾಡಿದವನಲ್ಲ. ಗ್ರಂಥ ಸಂಪಾದನೆ ಮತ್ತು ಸೃಜನಶೀಲ ಬರಹಗಳೆರಡರಲ್ಲೂ ತೊಡಗಿಸಿಕೊಂಡಿದ್ದೀರಿ. ನಿಮಗೆ ಖುಷಿ ಕೊಟ್ಟಿದ್ದು…ಗ್ರಂಥ ಸಂಪಾದನೆ ಇರಲಿ, ಸೃಜನಶೀಲ ಬರವಣಿಗೆ ಇರಲಿ ಎರಡನ್ನೂ ಖುಷಿಯಿಂದಲೇ ಮಾಡಿದ್ದೀನಿ ಅಂತ ಹೇಳಬಲ್ಲೆ. ಈಗ ತಿರುಗಿ ನೋಡಿದರೆ ಇವನ್ನೆಲ್ಲಾ ಬರೆದದ್ದು ನಾನೇನಾ ಅನಿಸುತ್ತದೆ. ನಾನು ಬರೆದಿಲ್ಲ; ಯಾವುದೋ ಶಕ್ತಿ ನನ್ನ ಕೈಯಿಂದ ಬರೆಸಿತು ಅನ್ನುವುದೇ ನಿಜ. ಏನೇ ಮಾಡಿದರೂ ಆ ಒಂದು ಆವೇಶದಿಂದ, ಮನಃಪೂರ್ವಕವಾಗಿ ಮಾಡಬೇಕು. ಇಲ್ಲದೇ ಹೋದರೆ ಅದು ಕೂಲಿ ಕೆಲಸ ಆಗುತ್ತದೆ.
ಗ್ರಂಥ ಸಂಪಾದನೆಯತ್ತ ನಿಮ್ಮ ಒಲವು ಹರಿದಿದ್ದು ಹೇಗೆ?
ನಾನು ವಿದ್ಯಾರ್ಥಿ ದೆಸೆಯಲ್ಲಿ ನಮ್ಮ ಪ್ರಾಚೀನ ಪಠ್ಯಗಳನ್ನು ಓದುತ್ತಾ, ಅರ್ಥ ಮಾಡಿಕೊಳ್ಳುತ್ತಿದ್ದಾಗ ಕೆಲವು ಕಡೆ ಏನೋ ತಪ್ಪಿದೆ; ಅರ್ಥ ಸರಿ ಬರುತ್ತಿಲ್ಲಾ ಎನಿಸುತ್ತಿತ್ತು. ಇದನ್ನು ನಮ್ಮ ಗುರುಗಳಿಗೂ ಹೇಳುತ್ತಿದ್ದೆ. ಅವರೂ ಕೂಡಾ ನನ್ನ ಹಾಗೇ ಅಭಿಪ್ರಾಯಪಡುತ್ತಿದ್ದರು. ಆನಂತರ ಪ್ರಾಚೀನ ಕೃತಿಯೊಂದರ ಹಲವು ಪಠ್ಯಗಳನ್ನು ಓದಿ ಯಾವುದು ಸರಿ ಎಂದು ನಿರ್ಣಯಿಸುವುದೇ ನನಗೆ ಒಂದು ಹವ್ಯಾಸವಾಗಿ ಹೋಯಿತು. ಹೀಗಾಗಿ ಗ್ರಂಥ ಸಂಪಾದನೆಯತ್ತ ನನ್ನನ್ನು ತೊಡಗಿಸಿಕೊಂಡೆ. ಮೇಲಾಗಿ ನಮ್ಮ ಪ್ರಾಚೀನ ಕೃತಿಗಳಲ್ಲಿ ಸಾಕಷ್ಟು ಪ್ರಕ್ಷೇಪಗಳಿವೆ. ಕೃತಿಯ ಉದ್ದೇಶವೇ ಮರೆಯಾಗಿ ಹೋಗುವಂತಹ ಪ್ರಕ್ಷೇಪಗಳಾಗಿವೆ. ಬಸವಣ್ಣನವರದಲ್ಲದ ಹಲವು ವಚನಗಳು ಅವರ ಅಂಕಿತನಾಮದಿಂದ ಪ್ರಕಟವಾಗಿದ್ದವು. ನಾನು ಅವನ್ನೆಲ್ಲಾ ಸ್ಥೂಲವಾಗಿ ಅಧ್ಯಯನ ಮಾಡಿ ಇವು ಬಸವಣ್ಣ ಅವರದಲ್ಲ ಎಂದು ಹೇಳಿದೆ. ಹೀಗೆ ಹೇಳಿದ್ದಕ್ಕೆ ಹಲವು ವಿರೋಧಗಳೂ ಬಂದವು. ಇನ್ನು ‘ಶೂನ್ಯಸಂಪಾದನೆ’ಯಂತಹ ಕೃತಿಗಳು ಬಹಳಷ್ಟು ಕಾಲ ಕೃತಿಕಾರನ ಹೆಸರಿನ ಬದಲಿಗೆ ಯಾರ್‍ಯಾರದೋ ಹೆಸರಿನಲ್ಲಿ ಪ್ರಕಟಗೊಳ್ಳುತ್ತಿತ್ತು. ಇಂತಹ ‘ಕಳ್ಳತನ’ದಲ್ಲಿ ಹಲವು ಮಠಗಳು, ಸ್ವಾಮೀಜಿಗಳೂ ಪಾಲ್ಗೊಂಡಿದ್ದು ಬೇಸರ ತರುವ ವಿಷಯ.
ಪ್ರಾಚೀನ ಕೃತಿಗಳು ಇಂದಿನ ಕಾಲಕ್ಕೆ ಎಷ್ಟು ಪ್ರಸ್ತುತ?
ಪ್ರಾಚೀನ ಕೃತಿಗಳಲ್ಲಿ ಎಲ್ಲಾ ಕಾಲಕ್ಕೂ ಪ್ರಸ್ತುತವಾಗುವ ಗಟ್ಟಿ ಕೃತಿಗಳೇ ಈಗಲೂ ಉಳಿದಿರುವುದು. ಅವು ಇಂದಿಗೂ ಪ್ರಸ್ತುತ. ಪಂಪ, ರನ್ನ, ಬಸವಾದಿ ಶರಣರು… ಅವರೆಲ್ಲಾ ಎಂಥಾ ನೀತಿ ಹೇಳಿದ್ದಾರೆ? ಆದರೆ ಅವುಗಳನ್ನೆಲ್ಲಾ ಈಗಿನವರು ಓದಬೇಕಲ್ಲಾ… ಓದಿ ಅದರಂತೆ ನಡೆಯಬೇಕಲ್ಲಾ… ರನ್ನನ ಒಂದು ಕಂದ ಪದ್ಯ ಹೀಗಿದೆ: ‘ಶ್ರೀಯುತನೊಳುದಾರತೆ, ವಾಕ್‌ಶ್ರೀಯುತನೊಳಮತ್ಸರತ್ವಂ ಆಗದು…’ ಅಂದರೆ ಶ್ರೀಮಂತರಲ್ಲಿ ಉದಾರತೆಯೂ, ಕವಿ-ಸಾಹಿತಿಗಳಲ್ಲಿ ಅಮತ್ಸರವೂ (ಪ್ರೀತಿ) ಇರುವುದಿಲ್ಲ. ಅದರ ಬದಲು ಉದಾರವಂತನೇ ಶ್ರೀಮಂತನಾಗಿ, ಅಮತ್ಸರನು ಕವಿಯಾದರೆ ಎಷ್ಟು ಚೆನ್ನ ಎನ್ನುತ್ತಾನೆ ರನ್ನ. ಇದು ಈಗಲೂ ಎಷ್ಟು ನಿಜ ನೋಡಿ. ನಮ್ಮ ಸಾಹಿತ್ಯವಲಯದಲ್ಲಿ ಎಷ್ಟು ಮತ್ಸರ ಇದೆ ಗೊತ್ತಲ್ಲ! ಇಂದಿನವರು ಹಿರಿಯರ ನೀತಿಯನ್ನು ಪಾಲಿಸುವುದಿಲ್ಲ. 12ನೇ ಶತಮಾನದಲ್ಲಿ ಬಸವಣ್ಣ ವೈದಿಕ ಧರ್ಮಕ್ಕೆ ಪ್ರತಿಯಾಗಿ ಸಮಾಜ ಸುಧಾರಣೆಯಾಗುವಂತಹ ಕಾಯಕ ಧರ್ಮವನ್ನು ಬೋಧಿಸಿದ. ಅದು ಜಾತಿರಹಿತ ಧರ್ಮ. ಆದರೆ ಈಗ ಬಸವನ ಅನುಯಾಯಿ ಎಂದುಕೊಳ್ಳುವವರು ‘ಬ್ರಾಹ್ಮಣ’ರಾಗಲು ಹೊರಟಿದ್ದಾರೆ; ಜಾತಿ ರಾಜಕೀಯದಲ್ಲೇ ತೊಡಗಿದ್ದಾರೆ.
ಹಾಗಿದ್ದರೆ ಈಗಿನ ಸಾಹಿತ್ಯದ ಜಾಡು ಎತ್ತ ಸಾಗುತ್ತಿದೆ?
ಈಗಿನ ಸಾಹಿತ್ಯವೇ? ಅದೇ ನೋಡಿ, ಯಾರಿಗೆ ಅಕಾಡೆಮಿ ಪ್ರಶಸ್ತಿ ಬಂತು, ಯಾರಿಗೆ ಪಂಪ ಪ್ರಶಸ್ತಿ ಬಂತು, ನಾಡೋಜ ಬಂತು; ತನಗೆ ಬರಲಿಲ್ಲ… ಎಂಬ ಮತ್ಸರದಲ್ಲಿ ತೊಡಗಿದೆ ಅಷ್ಟೇ. ನನಗೆ ಪ್ರಶಸ್ತಿ ಬಂತು ಅಂತ ನಾನು ಉಳಿದವರ ಬಗ್ಗೆ ತಿರಸ್ಕಾರದಿಂದ ಈ ಮಾತು ಹೇಳುತ್ತಿಲ್ಲ. ಆದರೆ ವಾಸ್ತವ ಹೀಗಿದೆ. ಸಾಹಿತ್ಯ ಎನ್ನುವುದು ಸತ್ಕ್ರಿಯೆಗೆ ಪ್ರೇರೇಪಣೆ ನೀಡಬೇಕು. ಅಂದರೆ ಒಂದು ರೀತಿಯಲ್ಲಿ ದೀಪದಿಂದ ದೀಪ ಹಚ್ಚುವ ಕೆಲಸ ಮಾಡಬೇಕು. ಆದರೆ ಇವತ್ತು ಸಾಹಿತಿಗಳು ಬರೀ ಮಾತನಾಡುತ್ತಿದ್ದಾರೆಯೇ ವಿನಾ ಕೆಲಸ ಮಾಡುತ್ತಿಲ್ಲ. ಇವತ್ತಿನ ಜ್ವಲಂತ ಸಮಸ್ಯೆಗಳಿಗೂ ತನಗೂ ಸಂಬಂಧವೇ ಇಲ್ಲ ಎನ್ನುವಂತೆ ಸಾಹಿತ್ಯ ಸಾಗುತ್ತಿದೆ. ಜನರಲ್ಲಿ ಜಾಗೃತಿ ಮೂಡಿಸುವಂಥ ಕೃತಿಗಳು ಬರುತ್ತಿಲ್ಲ. ಸಾಮಾನ್ಯವಾಗಿ ಬರೆಯುವವರು, ಸಾಹಿತಿಗಳನ್ನು ಜನ ಮಹಾತ್ಮ ಎಂದೇ ತಿಳಿಯುತ್ತಾರೆ. ಆದರೆ ಆತ ಮಹಾತ್ಮನೇನೂ ಆಗಿರುವುದಿಲ್ಲ. ಅವನಲ್ಲೂ ಎಲ್ಲರಂತೆ ಓರೆ-ಕೋರೆಗಳು ಇರುತ್ತವೆ. ಯುರೋಪ್‌ನಲ್ಲಿ ಇಂಗ್ಲೆಂಡ್-ಫ್ರೆಂಚ್ ಯುದ್ಧದ ಸಂದರ್ಭದಲ್ಲಿ ವರ್ಡ್ಸ್‌ವರ್ತ್ ಕವಿ ತನ್ನ ದೇಶದ ಬಗ್ಗೆ ಬಹಳ ಅಭಿಮಾನದಿಂದ ಬರೆದ. ಆದರೆ ಅದೇ ವೇಳೆ ಅವನ ದೇಶದ ಜನ ಭಾರತದಲ್ಲಿ ಶೋಷಣೆ ಮಾಡುತ್ತಿದ್ದಾಗ ಅದರ ಬಗ್ಗೆ ಚಕಾರ ಎತ್ತಲಿಲ್ಲ. ಹೀಗಾಗಿ ಕವಿಗಳೆಲ್ಲಾ ಮಹಾತ್ಮರೇನಲ್ಲ. ಇಂದು ಎಲ್ಲಾ ಕ್ಷೇತ್ರ ಹೊಲಸಾದ ಹಾಗೆ ಸಾಹಿತ್ಯವಲಯ ಕೂಡಾ ಹೊಲಸಾಗಿಬಿಟ್ಟಿದೆ. ನನಗಂತೂ ಯಾವುದೇ ಆಶಾವಾದ ಕಾಣುತ್ತಿಲ್ಲ. ಇವತ್ತು ಸ್ವಾಮೀಜಿಗಳು, ರಾಜಕಾರಣಿಗಳು ಮತ್ತು ಸಾಹಿತಿಗಳನ್ನು ಒಂದೇ ತಕ್ಕಡಿಯಲ್ಲಿ ತೂಗಬಹುದು.
ಸಾಹಿತ್ಯ ಸಮ್ಮೇಳನಗಳು ಕೂಡಾ ವಿವಾದಗಳಿಂದ ಹೊರತಾಗುತ್ತಿಲ್ಲ…
ಅದೇ ನಾನು ಹೇಳಿದೆನಲ್ಲಾ. ಇವತ್ತು ದುಡ್ಡು, ದುರಹಂಕಾರ, ದುರಾಡಳಿತ ಇವುಗಳಿಂದ ಎಲ್ಲಾ ಕ್ಷೇತ್ರಗಳೂ ಹೊಲಸಾಗುತ್ತಿವೆ. ಸಾಹಿತ್ಯ ವಲಯ ಕೂಡಾ ತಪ್ಪು ದಾರಿಯಲ್ಲಿ ಸಾಗುತ್ತಿದೆ. ನನಗೆ ಪರಮಾಶ್ಚರ್ಯ ಆಗುವಂಥ, ಆತಂಕಕಾರಿ ವಿಷಯ ಎಂದರೆ, ನಾವು ಪರಸ್ಪರ ಪ್ರೀತಿಸುತ್ತಲೇ ಇಲ್ಲ. ಬರೀ ದ್ವೇಷ ತುಂಬಿದೆ. ಪ್ರಾಯಶಃ ಯಾವ ದೇಶದಲ್ಲಿಯೂ ಇಷ್ಟೊಂದು ದ್ವೇಷ, ಕಚ್ಚಾಟ ಇಲ್ಲ ಎನಿಸುತ್ತೆ. ದ್ವೇಷ ಮಾಡುವುದೇ ನಮ್ಮ ಸಂಸ್ಕೃತಿಯಾ ಎಂಬ ಶಂಕೆ ಮೂಡಿಬಿಟ್ಟಿದೆ ನನಗೆ.ಸಮ್ಮೇಳನಗಳಲ್ಲಿ ಕೈಗೊಳ್ಳುವ ನಿರ್ಣಯಗಳು ಕೂಡಾ ಕೇವಲ ನೆಪಮಾತ್ರಕ್ಕೆ ಎನಿಸಿಬಿಟ್ಟಿವೆ. ಅವುಗಳಿಗೆ ಏನಾದರೂ ಅರ್ಥ ಇದೆ ಎನ್ನುತ್ತೀರಾ?ನಮ್ಮ ಭಾಷೆಯ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಸರ್ಕಾರ ನಿರ್ಣಯ ಕೈಗೊಳ್ಳಬೇಕು. ಆದರೆ ಅದು ಯಾವುದೇ ನಿರ್ಣಯ ಕೈಗೊಳ್ಳುತ್ತಿಲ್ಲ. ಹೀಗಾಗಿ ನಾವು ಕೈಗೊಳ್ಳಬೇಕಿದೆ. ಇದು ಒಂದು ರೀತಿ ಬಾಯಿ ಬಡಿದುಕೊಳ್ಳುವ ಕೆಲಸ, ಅಷ್ಟೇ.
ಶಾಸ್ತ್ರೀಯ ಸ್ಥಾನ-ಮಾನ ಸಿಕ್ಕ ಹಿನ್ನೆಲೆಯಲ್ಲಿ ಕನ್ನಡಕ್ಕೆ ಈಗ ಆಗಬೇಕಾದ ಕೆಲಸಗಳೇನು?
ಪ್ರಾಚೀನ ಸಾಹಿತ್ಯ ಮತ್ತು ಜನಪದ ಸಾಹಿತ್ಯವನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು. ಸಂಶೋಧನಾ ಕ್ಷೇತ್ರಕ್ಕೆ ನೆರವು ನೀಡಬೇಕು. ಅದಿರಲಿ. ಈ ಶಾಸ್ತ್ರೀಯ ಸ್ಥಾನ-ಮಾನ ಗಳಿಸಿಕೊಳ್ಳೋದಕ್ಕೆ ಎಷ್ಟೆಲ್ಲಾ ಹೋರಾಡಬೇಕಾಯಿತು ನೋಡಿ. ಅದೂ 90ರ ಅಂಚಿನಲ್ಲಿರುವ ದೇಜಗೌ ಅವರಂತಹ ಹಿರಿಯರು ಉಪವಾಸ ಮಾಡಬೇಕಾಯಿತು. ಆದರೆ ಕೇಂದ್ರ ಸರ್ಕಾರ ಕೊಡೋ ದುಡ್ಡಿನಿಂದಲೇ ಕನ್ನಡ ಭಾಷೆ ಅಭಿವೃದ್ಧಿ ಆಗಬೇಕೆ? ಏಕೆ, ರಾಜ್ಯ ಸರ್ಕಾರದ ಬಳಿ ದುಡ್ಡು ಇರಲಿಲ್ಲವೇ? ನಮ್ಮ ಭಾಷೆಯನ್ನು ನಾವೇ ಪ್ರೀತಿಸುತ್ತಿಲ್ಲ; ಮನುಷ್ಯ ಸ್ವಭಾವ ಎಷ್ಟು ವಿಚಿತ್ರ ನೋಡಿ. ನಮ್ಮ ಭಾಷೆಯನ್ನು ಉದ್ಧಾರ ಮಾಡೋದಕ್ಕೆ ನಮಗೇ ಮನಸಿಲ್ಲ!ಈಗಿನ ಭಯೋತ್ಪಾದನೆ ಜಾಗತಿಕ ಸಮುದಾಯದ ಮೇಲೆ ಒಡ್ಡಿರುವ ಸವಾಲಿಗೆ ಸಾಹಿತ್ಯ ಹೇಗೆ ಪ್ರತಿಕ್ರಿಯಿಸಬೇಕು?ಎಲ್ಲಿ ಮಹಾಕವಿ ವಿಫಲನಾಗುತ್ತಾನೋ ಅಲ್ಲಿ ಭಯೋತ್ಪಾದನೆ ದೈತ್ಯ ಸ್ವರೂಪ ತಾಳುತ್ತದೆ. ಇವತ್ತು ಮಹಾಕವಿ ವಿಫಲನಾಗಿದ್ದಾನೆ. ಎಲ್ಲಕ್ಕೂ ದ್ವೇಷವೇ ಮೂಲ ಆಗಿದೆ. ತಾನು ಒಂದು ಧರ್ಮ ಅನುಸರಿಸುತ್ತಿದ್ದೇನೆಂದರೆ ಮತ್ತೊಂದು ಧರ್ಮವನ್ನು ವಿರೋಧಿಸಬೇಕು, ದ್ವೇಷಿಸಬೇಕು ಎಂದು ಅರ್ಥವಲ್ಲ. ಪರಸ್ಪರ ಪ್ರೀತಿ, ಸೌಹಾರ್ದವನ್ನು ನಮ್ಮ ಹಿಂದಿನವರು ಹೇಳುತ್ತಲೇ ಬಂದಿದ್ದಾರೆ. ಆದರೆ ಕೇಳುವವರಿಲ್ಲ ಅಷ್ಟೇ. ಧರ್ಮವನ್ನು ಹೊಡೆದಾಟಕ್ಕೆ ಬಳಸಿಕೊಳ್ಳಲಾಗ್ತಿದೆ. ಆಡಳಿತ ಕೂಡಾ ಇದಕ್ಕೆ ಕುಮ್ಮಕ್ಕು ಕೊಡ್ತಿದೆ. ಪಾಕಿಸ್ತಾನದಲ್ಲಿ ಆಗುತ್ತಿರುವುದು ಇದೇ. ಹಿಂದೆ ಜೈನ, ವೈಷ್ಣವ ಮತ್ತು ಶೈವರ ನಡುವೆ ಕಿತ್ತಾಟ, ಜಗಳಗಳು ನಡೆದಿವೆ. ಅಂದರೆ ಪರಸ್ಪರ ದ್ವೇಷವೇ ಮನುಷ್ಯನ ಸಂಸ್ಕೃತಿ ಎನಿಸಿಬಿಟ್ಟಿದೆ. ಇದಕ್ಕೆ ಸಣ್ಣ ನೆಪಗಳು ಸಿಕ್ಕರೂ ಸಾಕು. ಬೇಸರದ ವಿಷಯ ಅಂದರೆ ಎಳೆಯ ಮಕ್ಕಳ ಮನಸ್ಸನ್ನು ತಿದ್ದುವಂಥ ಶಿಕ್ಷಕರು, ಅಧ್ಯಾಪಕರು ಬಹುಮಂದಿ ಇಲ್ಲ. ಶಿಕ್ಷಣ ವ್ಯವಸ್ಥೆ ಕೂಡಾ ಹಾಳಾಗಿದೆ. ಮನುಷ್ಯನ ಮನಸ್ಸು ಸಾತ್ವಿಕತೆ ಕಡೆ ಸಾಗಲು ಬೇಕಾದ ತಯಾರಿ ಕೂಡಾ ಇಲ್ಲದಂತಾಗಿದೆ. ವಿದ್ಯಾಭ್ಯಾಸವನ್ನೇ ಖಾಸಗೀಕರಣ ಮಾಡಿಬಿಟ್ಟಿದ್ದಾರೆ. ಅಂದರೆ ವಿದ್ಯೆಯನ್ನು ಶ್ರಮಪಟ್ಟು ಗಳಿಸುವುದಲ್ಲ; ಬದಲಿಗೆ ದುಡ್ಡುಕೊಟ್ಟು ಖರೀದಿಸುವಂಥ ಪರಿಸ್ಥಿತಿ ಇದೆ. ಹೀಗಾಗಿ ಮುಂದಿನ ಪೀಳಿಗೆ ಬಗ್ಗೆ ಯಾವುದೇ ಆಶಾವಾದ ಇಟ್ಟುಕೊಳ್ಳದಂಥ ಪರಿಸ್ಥಿತಿ ಇದೆ. ಇದನ್ನು ಹೇಗೆ ಉತ್ತಮಪಡಿಸುವುದು, ನನಗಂತೂ ಗೊತ್ತಾಗುತ್ತಿಲ್ಲ.
ನಿಮ್ಮ ಮುಂದಿನ ಬರವಣಿಗೆ?
ಪಂಪನ ‘ವಿಕ್ರಮಾರ್ಜುನ ವಿಜಯಂ’ ಕಾವ್ಯವನ್ನು ಮೂಲ ಮಹಾಭಾರತದೊಡನೆ ತುಲನೆ ಮಾಡಿ ಬರೆದ ಕೃತಿ ಅಚ್ಚಿನಲ್ಲಿದೆ. ಬಸವಣ್ಣನವರ ವಚನಗಳು ಈ ಕಾಲಕ್ಕೆ ಹೇಗೆ ಪ್ರಸ್ತುತವಾಗಿವೆ ಎಂಬುದರ ಬಗೆಗಿನ ವಿಮರ್ಶಾ ಕೃತಿಯೂ ಸದ್ಯವೇ ಪ್ರಕಟಗೊಳ್ಳಲಿದೆ. ಸದ್ಯಕ್ಕೆ ಈ ಎರಡು ಕೃತಿಗಳು ಬರಲಿವೆ. ಈಗಿನ ದೇಹಪ್ರಕೃತಿಯಲ್ಲಿ ಮುಂಚಿನ ಹಾಗೆ ಬರೆಯಲು ಸಾಧ್ಯವಾಗುವುದಿಲ್ಲ.ಯುವ ಜನಾಂಗಕ್ಕೆ, ಯುವ ಬರಹಗಾರರಿಗೆ ನಿಮ್ಮ ಕಿವಿಮಾತು ಏನು?ನಾನು ಆಗಲೇ ಹೇಳಿದೆನಲ್ಲಾ, ಕಿವಿಮಾತು ಹೇಳಿದರೆ ಅದನ್ನು ಕೇಳುವವರು ಯಾರು? ನಮ್ಮ ಪ್ರಾಚೀನರೇ ಎಲ್ಲಾ ಹೇಳಿದ್ದಾರೆ. ಆದರೆ ಅನುಸರಿಸುವವರಿಲ್ಲ ಅಷ್ಟೇ. ನಮ್ಮ ದೇಶ, ಸಂಸ್ಕೃತಿಯನ್ನು ನಾನು ತುಂಬಾ ಬೈಯುತ್ತಿದ್ದೀನಿ ಅಂತ ನಿಮಗೆ ಅನಿಸುತ್ತಿದೆಯೇ? ಹಾಗೇನಾದರೂ ನಿಮಗೆ ಅನಿಸಿದ್ದರೆ ನಾನು ವಿವೇಕಸ್ಥ ಅಂತ ಅರ್ಥ!
(ಕೃಪೆ: ಸಂಡೇ ಇಂಡಿಯನ್)
Subscribe to:
Comments (Atom)
ದಾಸಿಮಯ್ಯನ ವಚನ
ಒಡಲುಗೊಂಡವ ಹಸಿವ; ಒಡಲುಗೊಂಡವ ಹುಸಿವ ಒಡಲುಗೊಂಡವನೆಂದು ನೀನೆನ್ನ ಜರಿದೊಮ್ಮೆ ನುಡಿಯದಿರ ನೀನೆನ್ನಂತೆ ಒಮ್ಮೆ ಒಡಲುಗೊಂಡು ನೋಡ ರಾಮನಾಥ.
-
ತಪೋನಂದನ : ಮಹಾಶ್ವೇತೆಯ ತಪಸ್ಸು ೧ ಮನುಷ್ಯನ ಮನಸ್ಸು ಊರ್ಧ್ವಮುಖಿ. ಅವನ ಕನಸು ಗಗನಗಾಮಿ. ಅವನ ಕಲ್ಪನೆ ನಕ್ಷತ್ರಯಾತ್ರಿ. ಆ ಊರ್ಧ್ವಮುಖದ, ಗಗನಗಮನದ ಮತ್ತು ನಕ...

